Thursday, June 4, 2026
Homeಅಪರಾಧಅನ್ಯಕೋಮಿನ ಯುವಕನ ಮೇಲೆ ಲವ್ ಜಿಹಾದ್ ಆರೋಪ; ಯುವಕನನ್ನು ರೂಮ್ ನಲ್ಲಿ ಕೂಡಿ ಹಾಕಿ ಹಲ್ಲೆ...

ಅನ್ಯಕೋಮಿನ ಯುವಕನ ಮೇಲೆ ಲವ್ ಜಿಹಾದ್ ಆರೋಪ; ಯುವಕನನ್ನು ರೂಮ್ ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ ಹಿಂದೂಪರ ಕಾರ್ಯಕರ್ತರು; ಪ್ರಕರಣದ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಚಿಕ್ಕಮಗಳೂರು: ಹಿಂದೂಪರ ಕಾರ್ಯಕರ್ತರು ಮುಸ್ಲಿಂ ಯುವಕನಿಂದ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ ಯುವಕನನ್ನು ರೂಮ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ಸಂಬಂಧ ಅನ್ಯ ಕೋಮಿನ ಯುವಕ ಹಾಗೂ ವಿಹೆಚ್‌ಪಿ ಕಾರ್ಯಕರ್ತನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ, ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಲ್ಲೂರು ಪಟ್ಟಣದಲ್ಲಿ ನಡೆದಿದೆ.

ವಿಹೆಚ್‌ಪಿ ಜಿಲ್ಲಾ ಸಂಚಾಲಕ ಸೇರಿ ಒಟ್ಟು 6 ಮಂದಿ ವಿರುದ್ಧ ಯುವಕನನ್ನು ರೂಮ್ ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಅನ್ಯಕೋಮಿನ ಯುವಕನ ಮೇಲೆ ಪೋಕ್ಸ್ ಅಡಿಯಲ್ಲಿ ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲೂರು ಪಟ್ಟಣದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದ್ದು, ಪಟ್ಟಣದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!