Monday, June 8, 2026
Homeಕರಾವಳಿವಾರೆಂಟ್ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸರು

ವಾರೆಂಟ್ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ :  4 ಚೆಕ್ ಬೌನ್ಸ್ ಪ್ರಕರಣದಲ್ಲಿ ಸುಮಾರು 6 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ವಾರೆಂಟ್  ಆರೋಪಿ ಹಾಸನ ಜಿಲ್ಲೆಯ ಅಡ್ಲಿ ನಿವಾಸಿ ನಂಜುಂಡಪ್ಪನ ಮಗ ಹೆಚ್.ಏನ್.ಸುರೇಶ(38) ಎಂಬಾತನನ್ನು ಬಂಧಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಜಿ.ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್ಪೆಕ್ಟರ್ ಮುರಳೀಧರ ಮತ್ತು ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ ಮತ್ತು ಬಸವರಾಜ್ ರವರು ಆಂಧ್ರ ಪ್ರದೇಶದ ಪ್ರಕಾಶಮ್ ಜಿಲ್ಲೆಯ ಕಂಡಕೂರು ಪ್ರದೇಶದಲ್ಲಿ ಫೆ.8 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಫೆ.9 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!