- Advertisement -
![]()
- Advertisement -
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆಂತಕ ಪಡಬೇಡಿ ಎಂಬುದಾಗಿ ತಿಳಿಸಿದ್ದಾರೆ.ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯನ್ನು ಗಮನಿಸಿದ್ದೇನೆ. ಆ ತರದ ಯಾವುದೇ ಅನಾರೋಗ್ಯಕ್ಕೆ ನಾನು ಒಳಗಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ನಿಗದಿಯಂತೆ ರೊಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ. ನಾನು ಶೀಘ್ರದಲ್ಲೇ ಮನೆಗೆ ಹಿಂದಿರುಗುತ್ತೇನೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
- Advertisement -


