Thursday, June 4, 2026
Homeಕರಾವಳಿಉಡುಪಿಉಡುಪಿ: ಪರೀಕ್ಷೆ ನಡೆಯುತ್ತಿದ್ದಾಗಲೇ ಹೆದರಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷೆ ನಡೆಯುತ್ತಿದ್ದಾಗಲೇ ಹೆದರಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಪರೀಕ್ಷೆಯ ಭೀತಿಯಿಂದಾಗಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಎಂಸಿಎಚ್‌ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಸತ್ಯಂ ಸುಮನ್(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.

ಬಿಹಾರ ಮೂಲದ ವಿದ್ಯಾರ್ಥಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿಯೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ವಿದ್ಯಾರ್ಥಿ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಗೊಂಡು ಓಡಾಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!