Tuesday, June 9, 2026
Homeಅಪರಾಧಶ್ರೀ ಕ್ಷೇತ್ರ ಧರ್ಮಸ್ಥಳದ ಕಛೇರಿ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಛೇರಿ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿಯಲ್ಲಿ ನಿಲ್ಲಿಸಿದ್ದ ಬೈಕನ್ನು ಖದೀಮರು ಕಳವುಗೈದಿರುವ ಘಟನೆ ನಡೆದಿದೆ.

ಬೈಕ್ ಹಿಟ್ನಾಳ್ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್ ಅವರಿಗೆ ಸೇರಿದ್ದಾಗಿದೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ತಮ್ಮ ಬೈಕನ್ನು ನಿಲ್ಲಿಸಿದ್ದರು. ಆದರೆ ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಬೈಕ್ ಕಾಣೆಯಾಗಿದೆ. ಸದ್ರಿ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಅಂದಾಜು 15000ರೂ ಮೌಲ್ಯದ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಬಸವರಾಜ್.ಎಸ್, ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!