Saturday, June 13, 2026
Homeಕರಾವಳಿತುಂಬೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ತುಂಬೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತುಂಬೆ ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು.

ಇದೇ ವೇಳೆ 12ನೇ ವರ್ಷದ ತಿರುವೈಲೋತ್ಸವದ ಅಂಗವಾಗಿ ಏರ್ಪಡಿಸಿರುವ ವಾಮಂಜೂರಿನ ತಿರುವೈಲುಗುತ್ತು ಸಂಕುಪೂಂಜ-ದೇವಪೂಂಜ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು.‌

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಆಳ್ವ, ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ, ಮಿಥುನ್ ರೈ, ಪದ್ಮರಾಜ್, ನಿತಿನ್ ಶೆಟ್ಟಿ, ರಾಹುಲ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಅಡ್ಯಾರ್ ನಲ್ಲಿ ನಡೆದ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!