Saturday, June 13, 2026
Homeಕರಾವಳಿಶಾಸಕರ ವಿರುದ್ದ ಎಫ್ ಐಆರ್ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಶಾಸಕರ ವಿರುದ್ದ ಎಫ್ ಐಆರ್ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಸೇಂಟ್ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪದ ವಿಚಾರವಾಗಿ ಮಂಗಳೂರಿನಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆದಿದೆ.

ಇಬ್ಬರು ಬಿಜೆಪಿ ಶಾಸಕರು ಮತ್ತು ಹಿಂದೂ ನಾಯಕರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.

ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆ ಬಳಿಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಮೆರವಣಿಗೆಯಲ್ಲಿ ತೆರಳಲು ಪ್ರಯತ್ನ ನಡೆಸಿದರು.

ಈ ವೇಳೆ ಬ್ಯಾರಿಕೇಡ್ ಅಳವಡಿಸಿ ಪೊಲೀಸರು ತಡೆದಾಗ, ಬಿಜೆಪಿ ಕಾರ್ಯಕರ್ತರಿಂದ ಜೈ ಶ್ರೀರಾಮ್ ಘೋಷಣೆ ಕೂಗಲ್ಪಟ್ಟು ನೂಕಾಟ ತಳ್ಳಾಟ ನಡೆದು ಹೋಗಿದೆ.

ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪೊಲೀಸರ ಜೊತೆಯಲ್ಲೂ ಬಿಜೆಪಿ ನಾಯಕರ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧದ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!