Saturday, June 13, 2026
Homeಕರಾವಳಿಬೆಳ್ತಂಗಡಿಯ ವಕೀಲರ ಸಂಘದಿಂದ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿಯ ವಕೀಲರ ಸಂಘದಿಂದ ಕಾನೂನು ಅರಿವು ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ) ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ, ತಾಲೂಕು ಶಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 26 ಸೋಮವಾರದಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಶಾಖೆಯ ತಾಲೂಕು ಪ್ರಧಾನ ಸಂಚಾಲಕ ಆರ್. ರಮೇಶ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರು ಮನೋಹರ ಕುಮಾರ್ ಎ ಅವರು ‘ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಕುರಿತು’ ಮಾತನಾಡಲಿದ್ದಾರೆ.

- Advertisement -

Latest News

error: Content is protected !!