Wednesday, June 3, 2026
Homeಕರಾವಳಿಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಮೂಡುಬಿದಿರೆ: ಇಲ್ಲಿನ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾಗಿದ್ದು, ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಣೆಯಾದ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ(19). ಈಕೆ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಎಂದಿನಂತೆ ಶುಕ್ರವಾರದಂದು ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿಯಿದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ.

ಗುರುತು: ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!