Saturday, June 13, 2026
Homeಕರಾವಳಿಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಮೃತ್ಯು

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಮೃತ್ಯು

- Advertisement -
- Advertisement -

ದಾವಣಗೆರೆಯ ನ್ಯಾಮತಿ ತಾಲೂಕಿನ ಸವಳಂಗದಲ್ಲಿ ಬಾಲಕನೋರ್ವ ಜೋಕಾಲಿ ಆಡುತ್ತಿರುವಾಗ ಅದರ ಹಗ್ಗ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬಾಲಕ ಪಿ.ಜೆ ಕೊಟ್ರೇಶ್ (14) ಎಂದು ತಿಳಿದು ಬಂದಿದೆ.

ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದ ಸಂದರ್ಭ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಬಾಲಕನ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!