Friday, June 5, 2026
Homeತಾಜಾ ಸುದ್ದಿಬೆಂಗಳೂರು : ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್

ಬೆಂಗಳೂರು : ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್

- Advertisement -
- Advertisement -

ಬೆಂಗಳೂರು : ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಕ್ಕೆ ಎಸ್ ಟಿ ಸೋಮಶೇಖರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾತನಿಡದ ಅವರು, ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ ನಿಮ್ಮ ಮೂಲಕ ಎಸ್ ಟಿ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ ಇದೀಗ ಶಿವರಾಮ್ ಹೆಬ್ಬಾರ್ ಕೂಡ ಅದೇ ದಾರಿ ತುಳುಯುತ್ತಾರೆ ಎಂದು ಬಿಜೆಪಿಗೆ ಭೀತಿ ಶುರುವಾಗಿದೆ ಹೀಗಾಗಿ ಬಿಜೆಪಿ ಅಡ್ಡ ಮತದಾನ ಮಾಡದೆ ಇರಲು ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಲು ಮುಂದಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!