Friday, June 5, 2026
Homeಕರಾವಳಿಕಾಪುನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಕಾಪುನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

- Advertisement -
- Advertisement -

ಕಾಪು: ಇಲ್ಲಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ನಡೆದಿದೆ.

ಮೃತ ದುರ್ದೈವಿ ಕಾಪು ಪೊಲಿಪು ನಿವಾಸಿ ಕಿಶೋರ್ (29) ಎಂದು ಗುರುತಿಸಲಾಗಿದೆ.

ಕಿಶೋರ್ ಪ್ರತಿದಿನ ಕಯಾಕ್ ಮೂಲಕ ಒಬ್ಬರೇ ಮೀನುಗಾರಿಕೆಗೆ ತೆರಳುತ್ತಿದ್ದರು. ಶುಕ್ರವಾರದಂದು ಕೂಡ ಮುಂಜಾನೆಯ ವೇಳೆಗೆ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ.

ಇನ್ನು ಮತ್ತೊಂದು ಬೋಟಿನವರು ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ್ದು, ಆ ವೇಳೆಗೆ ಅವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ. ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!