Thursday, June 4, 2026
HomeUncategorizedರಾಮೇಶ್ವರಂ ಕೆಫೆ ಸ್ಫೋಟ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ಪ್ರತಿಭಟನೆ

ರಾಮೇಶ್ವರಂ ಕೆಫೆ ಸ್ಫೋಟ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಬಂಟ್ವಾಳ: ಬೆಂಗಳೂರಿನ‌ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

ಬಂಟ್ವಾಳ ಮಂಡಲ ಬಿಜೆಪಿ ವತಿಯಿಂದ ಬಿ.ಸಿ. ರೋಡ್ ಫ್ಲೈ ಓವರ್ ಬಳಿ ಪ್ರತಿಭಟನೆ ನಡೆಸಲಾಗಿದ್ದು, ಪಾಕಿಸ್ತಾನ ಪ್ರೇಮಿ ಕಾಂಗ್ರೆಸ್ ಸರ್ಕಾರ ಎಂದು ಪ್ಲಕಾರ್ಡ್ ಹಿಡಿದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಪೆಟ್ರೋಲ್ ಸುರಿದು ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು‌ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಘೋಷಣೆಯನ್ನೂ ಕೂಗಿದ್ದಾರೆ.ಇದೇ ವೇಳೆ ರಸ್ತೆಯಲ್ಲಿ ಟೈರ್ ಗೂ ಬೆಂಕಿ ಹಚ್ಚಿ ಪ್ರತಿಭಟಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!