Thursday, June 4, 2026
Homeಕರಾವಳಿಉಪ್ಪಿನಂಗಡಿ: ಚಾಲಕನ  ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ ; ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ...

ಉಪ್ಪಿನಂಗಡಿ: ಚಾಲಕನ  ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ ; ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿ

- Advertisement -
- Advertisement -

ಉಪ್ಪಿನಂಗಡಿ: ಚಾಲಕನ  ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಚಾಲಕ ಅಜಾಗರೂಕತೆಯಿಂದ ಬಸ್ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್‌ ಪ್ರದೇಶ ದಾಟಿ ಅಂಗಡಿಗೆ ನುಗ್ಗಿದ್ದರಿಂದ ನಾಗರಾಜ್‌ ಭಟ್‌ ಎಂಬವರ ಸಿಹಿತಿಂಡಿ ಮತ್ತು ತಂಪು ಪಾನೀಯ ಮಾರಾಟದ ಅಂಗಡಿಗೆ ಹಾನಿಯಾಗಿದೆ. ಕಬ್ಬು ಅರೆಯುವ ಯಂತ್ರ ಸೇರಿದಂತೆ ಅಂಗಡಿಯ ಕಪಾಟುಗಳಿಗೂ ಹಾನಿಯಾಗಿದೆ. ಮಾತ್ರವಲ್ಲದೆ ಮೂರ್‍ನಾಲ್ಕು ದ್ವಿಚಕ್ರ ವಾಹನ ಹಾಗೂ ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಈ ದುರ್ಘ‌ಟನೆಯ ಸಂದರ್ಭ ಕೆಲವೇ ಜನರಿದ್ದರಿಂದ, ಅವರು ಅಲ್ಲಿಂದ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್‌ ಅಂಗಡಿಯವರು ಅಪಾಯದಿಂದ ಪಾರಾಗಿದ್ದಾರೆ

- Advertisement -

Latest News

error: Content is protected !!