Saturday, June 6, 2026
Homeಕರಾವಳಿಕಡಬ: ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನಲ್ಲೇ ಆ್ಯಸಿಡ್ ದಾಳಿ

ಕಡಬ: ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಾಲೇಜಿನಲ್ಲೇ ಆ್ಯಸಿಡ್ ದಾಳಿ

- Advertisement -
- Advertisement -

ಕಡಬ: ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಡಬದಲ್ಲಿ ನಡೆದಿದೆ.

ಕಡಬ‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಹಾಕಿದ್ದಾನೆ.

ಆ್ಯಸಿಡ್ ಹಾಕಿರುವ ವ್ಯಕ್ತಿ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಅಬಿನ್ ಎಂದು ಗುರುತಿಸಲಾಗಿದ್ದು, ಎಂಬಿಎ ವಿದ್ಯಾರ್ಥಿ ಎಂದು ಹೇಳಲಾಗಿದ್ದು
ಮಾಸ್ಕ್ ಮತ್ತು ಟೋಪಿ ಧರಿಸಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮುಖಕ್ಕೆ ಗಾಯಗೊಂಡಿರುವ ವಿದ್ಯಾರ್ಥಿನಿಯರಿಗೆ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು,
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎನ್ನಲಾಗಿದೆ.

ವಿದ್ಯಾರ್ಥಿನಿಯರು ಶಾಲಾ ವರಾಂಡದಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

- Advertisement -

Latest News

error: Content is protected !!