Saturday, June 6, 2026
Homeಕರಾವಳಿಕಡಬ;ಬೈಕ್ ಹಾಗೂ ಮಿನಿ ಗೂಡ್ಸ್ ಮಧ್ಯೆ ಅಪಘಾತ; ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಾವು

ಕಡಬ;ಬೈಕ್ ಹಾಗೂ ಮಿನಿ ಗೂಡ್ಸ್ ಮಧ್ಯೆ ಅಪಘಾತ; ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಾವು

- Advertisement -
- Advertisement -

ಕಡಬ;ಬೈಕ್ ಹಾಗೂ ಮಿನಿ ಗೂಡ್ಸ್ ಮಧ್ಯೆ ಅಪಘಾತ ಸಂಭವಿಸಿ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ.

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತ ದುರ್ದೈವಿ.

ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ..

- Advertisement -

Latest News

error: Content is protected !!