Thursday, June 4, 2026
Homeಕರಾವಳಿಪುತ್ತೂರು; ಪರೀಕ್ಷೆ ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು; ಪರೀಕ್ಷೆ ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ಪುತ್ತೂರು; ಪರೀಕ್ಷೆ ಭಯದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿ ನಡೆದಿದೆ. ಇಲ್ಲಿನ ಸೋಮಸುಂದರ ಅವರ ಪುತ್ರಿ ಪುತ್ತೂರಿನ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಆರತಿ (17) ಮೃತ ದುರ್ದೈವಿ.

ಆರತಿ ಹೆಚ್ಚಾಗಿ ಮೊಬೈಲ್‌ ಪೋನ್‌ ಬಳಕೆ ಮಾಡುತ್ತಿದ್ದುದಕ್ಕೆ ಓದಿನ ಕಡೆ ಗಮನ ನೀಡಿದಂತೆ ಮನೆಯವರು ಬುದ್ಧಿವಾದ ಹೇಳಿದ್ದರು. ಫೆ. 22ರಂದು ಕಾಲೇಜಿನಿಂದ ಮನೆಗೆ ಬಂದ ಆಕೆ ನನಗೆ ಪರೀಕ್ಷೆಯ ಭಯವಾಗುತ್ತದೆ. ನಾನು ಇಲಿ ಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಮನೆಯವರು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಮಾ. 2ರಂದು ಮತ್ತೆ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!