Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿ ಭಯೋತ್ಪಾದನಾ ವಿರೋಧಿ ವೇದಿಕೆಯಿಂದ ಪ್ರತಿಭಟನೆ; ಎಂ.ಜಿ. ಹೆಗಡೆ ಫ್ಲೆಕ್ಸ್ ಗೆ ಉಗುಳಿದ ಶಾಸಕ ಯಶಪಾಲ್...

ಉಡುಪಿಯಲ್ಲಿ ಭಯೋತ್ಪಾದನಾ ವಿರೋಧಿ ವೇದಿಕೆಯಿಂದ ಪ್ರತಿಭಟನೆ; ಎಂ.ಜಿ. ಹೆಗಡೆ ಫ್ಲೆಕ್ಸ್ ಗೆ ಉಗುಳಿದ ಶಾಸಕ ಯಶಪಾಲ್ ಸುವರ್ಣ

- Advertisement -
- Advertisement -

ಉಡುಪಿ: ಭಯೋತ್ಪಾದನಾ ವಿರೋಧಿ ವೇದಿಕೆ ವತಿಯಿಂದ ಉಡುಪಿಯಲ್ಲಿ ಇಂದು ಪ್ರತಿಭಟನೆ ನಡೆಯಿತು.

ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸಾಬೀತಾಗದಿದ್ದರೆ ಮಾಧ್ಯಮಗಳ ಮುಖಕ್ಕೆ ಉಗಿಯಿರಿ ಎಂದಿದ್ದ ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗಡೆ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಉಗಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯ ಅಂತ್ಯದಲ್ಲಿ ಎಂ.ಜಿ. ಹೆಗಡೆ ಫ್ಲೆಕ್ಸ್ ಗೆ ಎಲೆ ಮತ್ತು ಅಡಿಕೆ ತಿಂದು ಉಗಿಯಲಾಗಿದೆ

ಉಡುಪಿ ಶಾಸಕ ಯಶಪಾಲ್ ಸುವರ್ಣ ಕೂಡಾ ಪ್ರತಿಭಟನೆಯಲ್ಲಿ ಭಾಗವಹಿಸಿ ಉಗುಳಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕೂಡಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!