Tuesday, June 9, 2026
Homeಕರಾವಳಿದ.ಕ. ಜಿಲ್ಲೆಯಿಂದ ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ತೆರಳಿದ ಬಿಜೆಪಿ ಕಾರ್ಯಕರ್ತರು

ದ.ಕ. ಜಿಲ್ಲೆಯಿಂದ ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ತೆರಳಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾನ ದರ್ಶನ ಪಡೆಯಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿ ಕಾರ್ಯಕರ್ತರು ತೆರಳಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ವಿಶೇಷ ರೈಲು ಅಯೋಧ್ಯೆಗೆ ತೆರಳಿದೆ. ಜಿಲ್ಲೆಯ ವಿವಿಧ ಬಿಜೆಪಿ ಮಂಡಲಗಳ ಕಾರ್ಯಕರ್ತರು ಅಯೋಧ್ಯೆಗೆ ಪ್ರಯಾಣಿಸಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕಾರ್ಯಕರ್ತರನ್ನು ಬೀಳ್ಕೊಟ್ಟರು.

ಇದೇ ವೇಳೆ ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಕೂಡಾ ಅಯೋಧ್ಯೆಗೆ ತೆರಳಿದ್ದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕರ್ತರಿಗೆ ಶುಭ ಹಾರೈಸಿದರು.‌

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ನಿನ್ನೆಯೇ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿದ್ದು ಶ್ರೀರಾಮನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!