Friday, June 5, 2026
Homeಅಪರಾಧದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ; ಶಂಕಿತನ ರೇಖಾಚಿತ್ರ ಬಿಡಿಸಿದ ಕಲಾವಿದ

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ; ಶಂಕಿತನ ರೇಖಾಚಿತ್ರ ಬಿಡಿಸಿದ ಕಲಾವಿದ

- Advertisement -
- Advertisement -

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಪತ್ತೆಗಾಗಿ ನೆರವು ನೀಡುವ ಉದ್ದೇಶದಿಂದ ಕಲಾವಿದ ಹರ್ಷ, ಶಂಕಿತನ ರೇಖಾಚಿತ್ರ ಬಿಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಶಂಕಿತನ ಪತ್ತೆಗಾಗಿ ಎನ್‌ಐಎ ಹಾಗೂ ಇತರೆ ತನಿಖಾ ಸಂಸ್ಥೆಗಳು ಹುಡುಕಾಟ ಆರಂಭಿಸಿವೆ.

ಶಂಕಿತನು ಸ್ಫೋಟಕ್ಕೂ ಮುನ್ನ ಹಾಗೂ ಸ್ಫೋಟದ ನಂತರ ಓಡಾಡುತ್ತಿದ್ದ ದೃಶ್ಯಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಲಾವಿದ ಹರ್ಷ ಇದೇ ದೃಶ್ಯಗಳನ್ನು ಆಧರಿಸಿ ರೇಖಾಚಿತ್ರ ಬಿಡಿಸಿದ್ದಾರೆ.

’10′ ಸಂಖ್ಯೆ ಕ್ಯಾಪ್ ಧರಿಸಿರುವ ಶಂಕಿತನ ಮೂರು ಪ್ರತ್ಯೇಕ ಮುಖಚಹರೆಯನ್ನು ಕಲಾವಿದ ಹರ್ಷ ಹಾಳೆ ಮೇಲೆ ಬಿಡಿಸಿದ್ದಾರೆ. ಇದೇ ರೇಖಾಚಿತ್ರವನ್ನು ಎನ್‌ಐಎ ಹಾಗೂ ಇತರೆ ತನಿಖಾ ಸಂಸ್ಥೆಗಳ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ಟ್ಯಾಗ್ ಮಾಡಿದ್ದಾರೆ.

- Advertisement -

Latest News

error: Content is protected !!