Saturday, June 6, 2026
Homeಕರಾವಳಿಉಡುಪಿಮೂಲ್ಕಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ‌ ಸಮಾವೇಶ

ಮೂಲ್ಕಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ‌ ಸಮಾವೇಶ

- Advertisement -
- Advertisement -

ಮೂಲ್ಕಿ: ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೂಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಮೂಲ್ಕಿ ತಾಲೂಕಿನ ಗಾಂಧಿ ಮೈದಾನದಲ್ಲಿ ನಡೆಯಿತು.

ಈ ಸಮಾವೇಶದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್, ಕೆಪಿಸಿಸಿ ಉಪಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಮುಲ್ಲೈ ಮುಹಿಲನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ. ಆನಂದ್ ಕೆ. ಉಪಸ್ಥಿತರಿದ್ದರು.

ಇದೇ ವೇಳೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಾವೇಶದ ಕುರಿತು ಸಭೆ ನಡೆಯಿತು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲೆಯ 10 ಬ್ಲಾಕ್ ಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!