Monday, June 8, 2026
Homeಕರಾವಳಿಪ್ರಧಾನಿ ಮೋದಿಯಿಂದ ಮಾ.12 ರಂದು ಮಂಗಳೂರು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ

ಪ್ರಧಾನಿ ಮೋದಿಯಿಂದ ಮಾ.12 ರಂದು ಮಂಗಳೂರು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ

- Advertisement -
- Advertisement -

ಮಂಗಳೂರು: ಮಾ.12 ರಂದು ಬೆಳಗ್ಗೆ 8 ಗಂಟೆಗೆ ಪ್ರಧಾನಿ ಮೋದಿ ಮಂಗಳೂರು- ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನೈರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ಮಂಗಳೂರು – ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.

ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರದ ಆರು ದಿನಗಳು ಈ ರೈಲು ಸಂಚರಿಸಲಿದೆ.

- Advertisement -

Latest News

error: Content is protected !!