Friday, June 5, 2026
Homeಕರಾವಳಿಮಂಗಳೂರುಉಳ್ಳಾಲದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಉಳ್ಳಾಲದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಂಗಳೂರಿ‌ನಲ್ಲಿ ನಡೆಯಿತು.

ಉಳ್ಳಾಲ ತಾಲೂಕು ವ್ಯಾಪ್ತಿಯ ಫಲಾನುಭವಿಗಳ ಸಮಾವೇಶ ಮಂಗಳೂರು ಹೊರವಲಯದ ಕಲ್ಲಾಪುವಿನ ಯು‌ನಿಟಿ ಹಾಲ್ ಮೈದಾನದಲ್ಲಿ ನಡೆಯಿತು.

ಸಮಾವೇಶದಲ್ಲಿ‌ ಕಂದಾಯ ಸಚಿವ ಕೃಷ್ಣ ಬೈರೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾಗಿಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸಮಾವೇಶದಲ್ಲಿ ಭಾಗಿಯಾಗಿದ್ದರು.

ಅಲ್ಲದೆ, ವಿವಿಧ ಗ್ಯಾರಂಟಿ ಯೋಜನೆಗಳ ನೂರಕ್ಕೂ ಹೆಚ್ಚು ಫಲಾನುಭವಿಗಳು ಕೂಡಾ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!