Thursday, June 4, 2026
Homeಕರಾವಳಿಕಡಬ:ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತ ವರ್ತನೆ; ಕಂಡೆಕ್ಟರ್ ನ್ನು ವಶಕ್ಕೆ...

ಕಡಬ:ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತ ವರ್ತನೆ; ಕಂಡೆಕ್ಟರ್ ನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕಡಬ:ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಬಸ್  ಕಂಡೆಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಮಣ್ಯಕ್ಕೆ ಸಾಗುವ ಕೆಎಸ್ ಆರ್ ಟಿಸಿ ಬಸ್ ನ್ನು ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬಲ್ಲಿ ಯುವತಿಯೊಬ್ಬರು ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ. ತಾನು ಇಳಿಯುವ ಸ್ಥಳ ಬಂದಾಗ ಮೈ‌ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ನಿರ್ವಾಹಕ ಸೂಚಿಸಿದ್ದ ಎಂದು‌ ಆರೋಪಿಸಲಾಗಿದೆ. ಬಸ್ ನಿಲ್ಲಿಸದೆ ಅನುಚಿತ ವರ್ತನೆ ತೋರಿದ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆ ಕಡಬ ಸಮೀಪದ ಕಳಾರ ಮಸೀದಿ ಬಳಿ ಬಸ್ ನ್ನು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ತಡೆದು ನಿಲ್ಲಿಸಿ ಬಳಿಕ ಠಾಣೆ ಗೆ ಕರೆದೊಯ್ದಿದ್ದಾರೆ.

ಒತ್ತಾಯ ಪೂರ್ವಕವಾಗಿ ಕಡಬದತ್ತ ಕರೆದುಕೊಂಡು ಬಂದಿರುವುದಾಗಿ ಯುವತಿ‌ KA 21F3276 ಬಸ್ಸಿನ ನಿರ್ವಾಹಕನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತೆರಳಲು ಪೊಲೀಸರು ಪರ್ಯಾಯವಾಗಿ ಬೇರೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ ನಿರ್ವಾಹಕನ್ನು ಬಸ್ ಸಮೇತ ಠಾಣೆಗೆ ಕರೆದೊಯ್ದರು.

- Advertisement -

Latest News

error: Content is protected !!