Sunday, June 7, 2026
HomeWorldದಿನನಿತ್ಯ ರಾಮಮಂದಿರಕ್ಕೆ ಒಂದು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ

ದಿನನಿತ್ಯ ರಾಮಮಂದಿರಕ್ಕೆ ಒಂದು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ

- Advertisement -
- Advertisement -

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ನೀಡಿದ ಮಾಹಿತಿಯಂತೆ ಪ್ರತೀದಿನ ರಾಮಮಂದಿರಕ್ಕೆ ಸರಾಸರಿ ಒಂದರಿಂದ ಒಂದೂವರೆ ಲಕ್ಷ ಜನ ಭಕ್ತರು ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದೆ.

ಇನ್ನು ಈ ಕುರಿತು ಟ್ವಿಟ್ ಮಾಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್, 60ರಿಂದ 70 ನಿಮಿಷದೊಳಗೆ ಶ್ರೀರಾಮ ದೇವರ ದರ್ಶನ ಮಾಡಲು ಭಕ್ತರ ಅನುಕೂಲಕ್ಕಾಗಿ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 6.30ರಿಂದ ಆರಂಭವಾಗಿ ರಾತ್ರಿ 9.30ರ ವರೆಗೆ ದರ್ಶನ ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

ಮಂದಿರಕ್ಕೆ ಬರುವಾಗ ಹೂವು, ಹಾರ, ಪ್ರಸಾದ ಇತ್ಯಾದಿಗಳನ್ನು ತರದಂತೆ ಮನವಿ ಮಾಡಲಾಗಿದೆ. ದರ್ಶನ ಟಿಕೆಟ್ ಅನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ. ಪ್ರವೇಶ ಸಂಪೂರ್ಣ ಉಚಿತವಾಗಿದೆ.

ನಿರ್ದಿಷ್ಟ ಶುಲ್ಕ ಪಾವತಿಸಿ ಅಥವಾ ವಿಶೇಷ ಪಾಸ್ ಮೂಲಕ ವಿಶೇಷ ದರ್ಶನಕ್ಕೆ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದೆ.

- Advertisement -

Latest News

error: Content is protected !!