Wednesday, June 3, 2026
Homeಪ್ರಮುಖ-ಸುದ್ದಿಚುನಾವಣೆಯಲ್ಲಿ ಸ್ಫರ್ಧೆಗೆ ಅವಕಾಶ ಸಿಕ್ಕಿದರೆ ವಿರೋಧಿಸುವುದಿಲ್ಲ:ಪುತ್ತೂರಿನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆ

ಚುನಾವಣೆಯಲ್ಲಿ ಸ್ಫರ್ಧೆಗೆ ಅವಕಾಶ ಸಿಕ್ಕಿದರೆ ವಿರೋಧಿಸುವುದಿಲ್ಲ:ಪುತ್ತೂರಿನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆ

- Advertisement -
- Advertisement -

ಪುತ್ತೂರು: ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕಿದರೆ ಅದಕ್ಕೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಪುತ್ತೂರಿನಲ್ಲಿ ಇಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಬಗ್ಗೆ ಪ್ರತಿಕ್ರಿಯಿಸಿದ ಸೂಲಿಬೆಲೆ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಅಂತಹ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದಿರುವ ಚಕ್ರವರ್ತಿ ಸೂಲಿಬೆಲೆ, ಸದ್ಯಕ್ಕೆ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ವದಂತಿ ಅಷ್ಟೇ ಎಂದಿದ್ದಾರೆ.

ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ ಎಂದು ತಿಳಿಸಿರುವ ಸೂಲಿಬೆಲೆ, ಇದುವರೆಗೆ ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಚಕ್ರವರ್ತಿ ಸೂಲಿಬೆಲೆ ಹೆಸರು ಕೇಳಿಬಂದಿತ್ತು.

- Advertisement -

Latest News

error: Content is protected !!