Sunday, October 18, 2026
Homeತಾಜಾ ಸುದ್ದಿಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

- Advertisement -
- Advertisement -

ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯ. ಬಿಜೆಪಿ ಅಭಿವೃದ್ಧಿಯ ಬದಲು ಕೋಮುವಾದಕ್ಕೆ ಆದ್ಯತೆ ನೀಡುತ್ತಿರುವ ಸರ್ವಾಧಿಕಾರಿ ಪಕ್ಷವಾಗಿದೆ. ಆ ಪಕ್ಷದ ಒಕ್ಕೂಟ ಸೋಲಿಸಲು ಆಪ್ ‘ಇಂಡಿಯಾ’ ಒಕ್ಕೂಟಕ್ಕೆ ಬೆಂಬಲಿಸುತ್ತಿದೆ ಎಂದರು.

‘ಧರ್ಮದ ಹೆಸರಿನಲ್ಲಿ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಚುನಾವಣಾ ಆಯೋಗದಿಂದ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲು ಕಾಯ್ದೆ ತಂದ ಬಿಜೆಪಿ, ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ. ಅಷ್ಟೇಅಲ್ಲದೆ ಉದ್ಯಮಿಗಳು, ಭ್ರಷ್ಟಾಚಾರಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ ಚುನಾವಣೆ ಬಾಂಡ್ ಖರೀದಿಸುವಂತೆ ಒತ್ತಡ ಹೇರಿದೆ. ಹಿಟ್ಲರ್ ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ನೀಡಿದೆ,’ ಎಂದರು.

ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುವ ಬಿಜೆಪಿ ವರಿಷ್ಠರು ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಲ್ಲಿನ ಹಲವು ನಾಯಕರ ಮಕ್ಕಳು ಚುನಾವಣೆಗೆ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ. ಕುಟುಂಬಕ್ಕೆ ಸೀಮಿತವಾದ ಜೆಡಿಎಸ್ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ. ಇವೆಲ್ಲ ಮೋದಿ ಗಮನದಲ್ಲಿ ಇಲ್ಲವೆ? ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಾಲಕೃಷ್ಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಲಿಯೋ ಲ್ಯೂಯಿಸ್, ಅನಂತಕುಮಾರ ಬುಗುಡಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!