Wednesday, June 3, 2026
HomeUncategorizedಪುತ್ತೂರು; ಅಂಗನವಾಡಿಗೆ ನುಗ್ಗಿ ಗಡದ್ದಾಗಿ ಆಮ್ಲೇಟ್ ಮಾಡಿ ತಿಂದ ಕಿಡಿಗೇಡಿಗಳು

ಪುತ್ತೂರು; ಅಂಗನವಾಡಿಗೆ ನುಗ್ಗಿ ಗಡದ್ದಾಗಿ ಆಮ್ಲೇಟ್ ಮಾಡಿ ತಿಂದ ಕಿಡಿಗೇಡಿಗಳು

- Advertisement -
- Advertisement -

ಪುತ್ತೂರು; ಅಂಗನವಾಡಿಗೆ ನುಗ್ಗಿದ ಕಿಡಿಗೇಡಿಗಳು ಗಡದ್ದಾಗಿ ಆಮ್ಲೇಟ್ ಮಾಡಿ ತಿಂದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಇಂದು ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಅಂಗನವಾಡಿಯ ಬಾಗಿಲ ಬೀಗ ಒಡೆದಿತ್ತು. ಒಳಗೆ ನೋಡಿದಾಗ ಅಡುಗೆ ಕೋಣೆಯಲ್ಲಿ ಪುಟಾಣಿಗಳಿಗೆಂದು ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದು, ಪಕ್ಕದಲ್ಲಿರುವ ಗ್ಯಾಸ್ ಸ್ಟವ್‌ನ ಬಾಣಲೆಯಲ್ಲಿ ಆಮ್ಲೇಟ್ ತುಂಡು ಇರುವುದು ಕಂಡು ಬಂದಿದೆ.

ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಆಮ್ಲೇಟ್ ಮಾಡಿ ತಿಂದು ಹೋಗಿದ್ದಾರೆ. ಈ ಬಗ್ಗೆ ಅಂಗನವಾಡಿ ಶಿಕ್ಷಕಿ ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!