Sunday, June 7, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಚುನಾವಣಾ ಸಿದ್ಧತಾ ಸಭೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಚುನಾವಣಾ ಸಿದ್ಧತಾ ಸಭೆ

- Advertisement -
- Advertisement -

ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಿತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಸಭೆ ನಡೆಯಿತು.‌

ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮತ್ತು ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಕುಮಾರ್ ಮರೋಳ್ಳಿ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಪ್ರತಿಕ್ರಿಯಿಸಿದ ಸಂಭಾವ್ಯ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಯಾರು ಅಭ್ಯರ್ಥಿಯಾದರೂ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಬೇಕು, ಪಕ್ಷದ ಬೂತ್ ಮಟ್ಟದ ಸಮಿತಿಗಳ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!