Friday, June 5, 2026
Homeಕರಾವಳಿಕುಕ್ಕೆ ಸುಬ್ರಮಣ್ಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಮಣ್ಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಕೆ

- Advertisement -
- Advertisement -

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಧರ್ಮಸ್ಥಳದಿಂದ ಹೆಲಿಕಾಫ್ಟರ್ ಮೂಲಕ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿದ ಡಿ.ಕೆ.‌ ಶಿವಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಮತಾ ಗಟ್ಟಿ, ವಿಮಲಾ ರಂಗಯ್ಯ, ಪಿ.ಸಿ. ಜಯರಾಮ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಮಣ್ಯದಿಂದ ಪೂಜೆ ಮುಗಿಸಿ ಡಿ.ಕೆ. ಶಿವಕುಮಾರ್ ಹೆಲಿಕಾಫ್ಟರ್ ಮೂಲಕ ಶೃಂಗೇರಿಗೆ ತೆರಳಿದರು.

- Advertisement -

Latest News

error: Content is protected !!