Wednesday, June 3, 2026
Homeಕರಾವಳಿಉಡುಪಿಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಖಾಸಗಿ ನಿವಾಸಕ್ಕೆ ಭೇಟಿ ನೀಡಿದ್ದ ಕೋಟ ಶ್ರೀನಿವಾಸ ಪೂಜಾರಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿನ ಚುನಾವಣಾ ತಂತ್ರದ ಬಗ್ಗೆಯೂ ಶ್ರೀನಿವಾಸ ಪೂಜಾರಿ ಮತ್ತು ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಕೆಲವು ದಿನಗಳ ಹಿಂದಷ್ಟೇ ಹೆಚ್.ಡಿ. ಕುಮಾರಸ್ವಾಮಿ ಚೆನ್ನೈ ನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

- Advertisement -

Latest News

error: Content is protected !!