Thursday, June 4, 2026
Homeಕರಾವಳಿಉಡುಪಿಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣ; ಇಂದು ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣ; ಇಂದು ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು

- Advertisement -
- Advertisement -

ಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿ ಮೇಲೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು.ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಉಡುಪಿ ಡಿವ್ಯೆಎಸ್ಪಿ ಪ್ರಭು ಡಿ.ಟಿ. ವಹಿಸಿದ್ದರು.

- Advertisement -

Latest News

error: Content is protected !!