Saturday, June 6, 2026
Homeಕರಾವಳಿತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ  ವಕೀಲರ ಸಂಘ(ರಿ) ಬೆಳ್ತಂಗಡಿಯಿಂದ  ವಿಶ್ವ ಜಲ ದಿನಾಚರಣೆ

ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ  ವಕೀಲರ ಸಂಘ(ರಿ) ಬೆಳ್ತಂಗಡಿಯಿಂದ  ವಿಶ್ವ ಜಲ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ(ರಿ) ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆಯನ್ನು ನ್ಯಾಯಾಲಯದ ಆವರಣ  ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ಉದ್ಘಾಟಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಕೀಲರ ಸಮಿತಿ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಏಲೋಶಿಯಸ್ ಎಸ್ ಲೋಬೊರವರು ವಹಿಸಿ ಅಧ್ಯಕ್ಷೀಯ  ಭಾಷಣವನ್ನು ಮಾಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ವಿಜಯೇಂದ್ರ ಟಿ ಎಚ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು  ಕಾರ್ಯಕ್ರಮದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಸಂದೇಶ ಕೆ  ಪ್ರಧಾನ ಸಿವಿಲ್ ನ್ಯಾಯಾಧೀಶರು, ಬೆಳ್ತಂಗಡಿ,ನವೀನ್ ಬಿ ಕೆ
ಪ್ರಧಾನ ಕಾರ್ಯದರ್ಶಿಗಳು ವಕೀಲರ ಸಂಘ (ರಿ )ಬೆಳ್ತಂಗಡಿ,ಆಶಿತಾ ಎಂ ಸಹಾಯಕ ಸರ್ಕಾರಿ ಅಭಿಯೋಜಕರು ಬೆಳ್ತಂಗಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ನ್ಯಾಯಾಲಯದ ಸಿಬ್ಬಂದಿಯಾದ ಪ್ರಕಾಶ್ ರವರು ನಿರೂಪಿಸಿದರು.

- Advertisement -

Latest News

error: Content is protected !!