Friday, June 5, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ; ಓರ್ವ ಸಾವು; ಇಬ್ಬರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ; ಓರ್ವ ಸಾವು; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರ ಮಧ್ಯಾಹ್ನ ಸಂಭವಿಸಿದೆ.

ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಐ20 ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಪರಿಣಾಮ ಚಾಲಕ ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ವಿವಿ ಮ್ಯಾಥ್ಯೂ ಅವರ ಮಗ ಪ್ರ್ರೈಸ್ ಮ್ಯಾಥ್ಯು (32) ಸಾವನ್ನಪ್ಪಿದ್ದು, ಕಾರಿನಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!