Thursday, June 4, 2026
Homeಕರಾವಳಿಬಿಜೆಪಿ ಅಪಪ್ರಚಾರದ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ; ಬಿ.ರಮಾನಾಥ ರೈ

ಬಿಜೆಪಿ ಅಪಪ್ರಚಾರದ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ; ಬಿ.ರಮಾನಾಥ ರೈ

- Advertisement -
- Advertisement -

ಮೂಲ್ಕಿ: ಬಿಜೆಪಿ ಪಕ್ಷವು ಅಪಪ್ರಚಾರದ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ಕುತಂತ್ರ ನಡೆಸುತ್ತಿದ್ದು, ಜನರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಸಹಿತ ಅನೇಕ ಜನಪ್ರಿಯ ಯೋಜನೆಗಳು ಜಾರಿಗೆ ಬಂದಿದ್ದು, ಜನರ ಬದುಕು ಹಸನಾಗಿದೆ,’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್, ‘ಬಿಜೆಪಿ ಆಡಳಿತದಿಂದ ಜಿಲ್ಲೆಯ ಹಲವು ವರ್ಷಗಳಿಂದ ಅಭಿವೃದ್ಧಿ ಸ್ಥಗಿತಗೊಂಡಿದೆ. ಜನರಲ್ಲಿ ಕೋಮು ಸಾಮರಸ್ಯ ಭಾವನೆ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯ ಜತೆಗೆ ಬೀಚ್‌ಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು,’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ವೀಕ್ಷಕ ವಸಂತ್ ಬರ್ನಾಡ್‌, ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರಮುಖರಾದ ಮಂಜುನಾಥ ಕಂಬಾರ, ಗುರುರಾಜ್ ಎಸ್.ಪೂಜಾರಿ, ಅಶೋಕ್, ಶಾಹುಲ್ ಹಮೀದ್ ಬಜ್ಪೆ, ಪ್ರಮೋದ್ ಕುಮಾರ್, ಸುರೇಶ್, ಹಸನಬ್ಬ, ಆಲ್ವಿನ್ ಭಾಗವಹಿಸಿದ್ದರು.

- Advertisement -

Latest News

error: Content is protected !!