Sunday, June 7, 2026
Homeಉದ್ಯಮಏಪ್ರಿಲ್ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್; 5 ಕೆ.ಜಿ ಎಫ್‌ಟಿಎಲ್, 19 ಕೆ.ಜಿ ವಾಣಿಜ್ಯ...

ಏಪ್ರಿಲ್ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್; 5 ಕೆ.ಜಿ ಎಫ್‌ಟಿಎಲ್, 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆ

- Advertisement -
- Advertisement -

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್‌ ಮತ್ತು 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ ಎಂದು ಮೂಲಗಳು ತಿಳಿಸಿವೆ.

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ ₹ 30.50 ಇಳಿಕೆಯಾಗಿದ್ದು, 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ ₹7.50 ಇಳಿಕೆಯಾಗಿದೆ. ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್‌ ಬೆಲೆ ₹ 1764.50 ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ 14 ಕೆ.ಜಿ ಯ ಸಿಲಿಂಡರ್‌ಗಳ ಬೆಲೆಯನ್ನು ₹100 ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದು ಮಹಿಳಾ ದಿನಾಚರಣೆಯ ಉಡುಗೊರೆಯೂ ಆಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು.

‘ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಇದು ಗಮನಾರ್ಹವಾಗಿ ತಗ್ಗಿಸಲಿದೆ ಮತ್ತು ನಾರಿ ಶಕ್ತಿಗೆ ಪ್ರಯೋಜನವಾಗಲಿದೆ’ ಎಂದು ಅವರು ಹೇಳಿದ್ದರು.

- Advertisement -

Latest News

error: Content is protected !!