Wednesday, June 3, 2026
Homeತಾಜಾ ಸುದ್ದಿಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣ; ಸೋನು ಶ್ರೀನಿವಾಸ್ ಗೌಡ ಗೆ ಜಾಮೀನು ಮಂಜೂರು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣ; ಸೋನು ಶ್ರೀನಿವಾಸ್ ಗೌಡ ಗೆ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಗೆ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರಿನ ಗ್ರಾಮಾಂತರ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ, 1 ಲಕ್ಷ ಬ್ಯಾಂಡ್ ಷರುತ್ತನ್ನು ನ್ಯಾಯಾಲಯವು ವಿಧಿಸಿದೆ. ನಾಳೆ ಅಥವಾ ನಾಡಿದ್ದು ಸೋನು ಶ್ರೀನಿವಾಸ್ ಗೌಡ ಜೈಲಿನಿಂದ ಬಿಡುಗಡೆಯಾಗೋ ಸಾಧ್ಯತೆಯಿದೆ.ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಮಾರ್ಚ್ 22 ರಂದು ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಗೀತಾ ಬ್ಯಾಡರಹಳ್ಳಿ ಪೊಲೀಸರಿಗೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದರಿಂದ ದೂರು ನೀಡಿದ್ದರು. ಈ ದೂರು ಆಧರಿಸಿ ಅವರನ್ನು ಬಂಧಿಸಲಾಗಿತ್ತು.

- Advertisement -

Latest News

error: Content is protected !!