Wednesday, June 3, 2026
Homeತಾಜಾ ಸುದ್ದಿಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್

ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್

- Advertisement -
- Advertisement -

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಸುಮಲತಾ ಅಂಬರೀಶ್ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯದಂತಹ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಸಿಟಿ ರವಿ ಸುಮಲತಾ ಪುತ್ರ ಅಂಬರೀಶ್ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜಿಲ್ಲೆಯ ಹಲವು ಮುಖಂಡರು ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸುಮಲತಾ ನನಗೆ ನನ್ನ ಭವಿಷ್ಯಕ್ಕಿಂತ ನನ್ನ ಮಂಡ್ಯ ಜಿಲ್ಲೆ ನಮ್ಮ ರಾಜ್ಯ ನಮ್ಮ ದೇಶದ ಭವಿಷ್ಯ ಮುಖ್ಯವಾಗಿದೆ.ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳನ್ನು ಮೆಚ್ಚಿಕೊಂಡು ಇಂದು ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದೇನೆ.ಇವತ್ತು ನನಗೆ ನನ್ನ ರಾಜಕೀಯ ಜೀವನದಲ್ಲಿ ಅತ್ಯಂತ ಸುದಿನವಾದಂತ ದಿನ ಎಂದು ಬಿಜೆಪಿ ಪಕ್ಷ ಸೇರ್ಪಡೆಯಾದ ಬಳಿಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎಂದರು.

- Advertisement -

Latest News

error: Content is protected !!