Thursday, June 4, 2026
Homeಕರಾವಳಿಉಡುಪಿಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿ ಕೋಟ ಶ್ರೀನಿವಾಸ...

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್

- Advertisement -
- Advertisement -

ಬೆಂಗಳೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕೋಟಾ ಶ್ರೀನಿವಾಸ್ ಪೂಜಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಶಾಸಕ ಗುರುಮಿ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆರ್ ಮೆಂಡನ್ಗು ಕೂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದೆ.ಮೇ 27 ರಂದು ಖುದ್ದಾಗಿ ಹಾಜರಾಗುವಂತೆ ಜಾರಿ ಮಾಡಿದೆ.

ಮಾರ್ಚ್ 30 ರಂದು ಘಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಪ್ರಚಾರ ಸಭೆ ನಡೆಸಿದ್ದರು. ಈ ಕುರಿತಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದೂರು ದಾಖಲಿಸಿದ್ದರು.ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

Latest News

error: Content is protected !!