Saturday, June 6, 2026
Homeತಾಜಾ ಸುದ್ದಿಮೋದಿ ದೇಶದ ಜನತೆಗೆ ಎಷ್ಟು ಗ್ಯಾರಂಟಿ ಕೊಟ್ಟಿದ್ದಾರೆಂಬ ಪಟ್ಟಿ ನೀಡಲಿ: ಸತೀಶ್‌ ಜಾರಕಿಹೊಳಿ

ಮೋದಿ ದೇಶದ ಜನತೆಗೆ ಎಷ್ಟು ಗ್ಯಾರಂಟಿ ಕೊಟ್ಟಿದ್ದಾರೆಂಬ ಪಟ್ಟಿ ನೀಡಲಿ: ಸತೀಶ್‌ ಜಾರಕಿಹೊಳಿ

- Advertisement -
- Advertisement -

ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದೇಶದ ಜನತೆಗೆ ಮೋದಿ ಎಷ್ಟು ಗ್ಯಾರಂಟಿಗಳನ್ನು ನೀಡಿದ್ದಾರೆಂಬ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಸವಾಲು ಹಾಕಿದರು.

ಅವರು ಸುದ್ದಿಗಾರರ ಜೊತೆಗೆ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ, ದೇಶದ ಜನತೆಗೆ ನಾನೇ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎಷ್ಟು ಗ್ಯಾರಂಟಿಗಳನ್ನು ನೀಡಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಿ,’ ಎಂದು ಹೇಳಿದರು.

ಜನಕ್ಕೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಅಭಿವೃದ್ಧಿ ಯೋಜನೆಗಳಿಗೂ ಹಣ ನೀಡುತ್ತಿದ್ದೇವೆ. ಕಾರಣ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಬಿಜೆಪಿಯವರ ಆರೋಪ ಸುಳ್ಳು ಎಂದರು.

- Advertisement -

Latest News

error: Content is protected !!