Wednesday, June 3, 2026
Homeಅಪರಾಧಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅಪಘಾತ: ವ್ಯಕ್ತಿ ಸ್ಥಳದಲ್ಲೇ ಸಾವು

ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅಪಘಾತ: ವ್ಯಕ್ತಿ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವೆ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಕೆ.ಆರ್. ಪುರಂನಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಈ ಅಪಘಾತ ನಡೆದಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಎಂಬವರು ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬಿಜೆಪಿ ಮುಖಂಡರೊಬ್ಬರ ಕಾರಿನ ಚಾಲಕ ಏಕಾಏಕಿ ಬಾಗಿಲು ತೆಗೆದ ಕಾರಣ ಆಕ್ಟೀವಾ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಬಿಜೆಪಿ ಕಾರ್ಯಕರ್ತ ಪ್ರಕಾಶ್ ರಸ್ತೆಗೆ ಬಿದ್ದಿದ್ದು ತಕ್ಷಣ ಪ್ರಕಾಶ್ ಮೇಲೆ ಖಾಸಗಿ ಬಸ್ ಹರಿದಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಮೃತ ಪ್ರಕಾಶ್ ಬಿಜೆಪಿ ಕಾರ್ಯಕರ್ತನಾಗಿದ್ದು ಪಕ್ಷದ ವತಿಯಿಂದಲೇ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

- Advertisement -

Latest News

error: Content is protected !!