Saturday, June 6, 2026
Homeಕರಾವಳಿಉಡುಪಿಉಡುಪಿ; ಕುಂದಾಪುರದಲ್ಲಿ‌ ಭೀಕರ ಅಪಘಾತ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಉಡುಪಿ; ಕುಂದಾಪುರದಲ್ಲಿ‌ ಭೀಕರ ಅಪಘಾತ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ ; ಟೊಯೋಟೊ ಇನ್ನೋವಾ ಕಾರು ಅಪಘಾತವಾಗಿ  ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮುಂಬಯಿಯಿಂದ ಕೇರಳದ ಮಾಯಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಪರಿಣಾಮ ಸಮೀರಾ (45) ಎಂಬ ಮಹಿಳೆ ಮೃತಪಟ್ಟಿದ್ದಾರೆ.   ಮೋನವರ್ ಟಿ. ಪಿ. (49) ಮತ್ತು ಪುತ್ರ ಸುಹೇಲ್ (19) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು  ಮಣಿಪಾಲ ಕೆ ಎಂ ಸಿ ಗೆ ಸಾಗಿಸಲಾಗಿದೆ.

ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡೆರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್ ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ .ಪೊಲೀಸರು ಸ್ಥಳಕ್ಕೆ ಭೇಟಿ‌ಕೊಟ್ಟು ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!