Thursday, May 16, 2024
Homeತಾಜಾ ಸುದ್ದಿಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; 5,52,690 ವಿದ್ಯಾರ್ಥಿಗಳು ಪಾಸ್; ಈ ಬಾರಿಯು ಬಾಲಕಿಯರೇ ಮೇಲುಗೈ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; 5,52,690 ವಿದ್ಯಾರ್ಥಿಗಳು ಪಾಸ್; ಈ ಬಾರಿಯು ಬಾಲಕಿಯರೇ ಮೇಲುಗೈ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್‌ 1 ರಿಂದ ಮಾರ್ಚ್ 22ರವರೆಗೆ ನಡೆದಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2024 (Karnataka 2nd PUC Results 2024 ) ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ವಿದ್ಯೋದಯ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಭವಿ ಆಚಾರ್ಯ 597 ಅಂಕ, ಕಾರ್ಕಳ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿ ಸಮ್ಯಕ್ ಆರ್. ಪ್ರಭು 595 ಅಂಕ, ವಾಣಿಜ್ಯ ವಿಭಾಗದಲ್ಲಿ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಎಸ್.ಎಚ್ 596 ಅಂಕ ಪಡೆಯುವ ಮೂಲಕ ರಾಜ್ಯ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆ ಹೊಸ ವಿದ್ಯಾರ್ಥಿಗಳ ಒಟ್ಟಾರೆ ಶೇ.96.80 ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಶೇ.95.24ರಷ್ಟು ಫಲಿತಾಂಶ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಮಾಣ ಶೇಕಡ 81.15 ಇದ್ದು, ನಗರ ಪ್ರದೇಶದ ಫಲಿತಾಂಶ ಪ್ರಮಾಣ ಶೇ81.10, ಗ್ರಾಮಾಂತರದ ಫಲಿತಾಂಶ ಪ್ರಮಾಣ ಶೇ 81.31 ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಎನ್‌.ಮಂಜುಶ್ರೀ ತಿಳಿಸಿದರು.

ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್ ಮಂಜುಶ್ರೀ, ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಈ ಬಾರಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 3.3 ಲಕ್ಷ ಬಾಲಕರು, 3.6 ಲಕ್ಷ ಬಾಲಕಿಯರು ತೇರ್ಗಡೆಯಾಗಿದ್ದಾರೆ. ಈ ವರ್ಷವೂ ಬಾಲಕಿಯರದೇ ಮೇಲುಗೈ ಕಂಡುಬಂದಿದೆ.

- Advertisement -
spot_img

Latest News

error: Content is protected !!