Friday, June 5, 2026
Homeಅಪರಾಧಅಕ್ರಮ ಮರಳುಗಾರಿಕೆ ಮೇಲೆ ದಾಳಿ

ಅಕ್ರಮ ಮರಳುಗಾರಿಕೆ ಮೇಲೆ ದಾಳಿ

- Advertisement -
- Advertisement -

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಉಪನಿರೀಕ್ಷಕ ಮುರಳೀಧರ್‌ ಕೆ.ಜಿ. ಹಾಗೂ ಸಿಬಂದಿ ದಾಳಿ ನಡೆಸಿದಾಗ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್‌ ಅವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್‌ ಮೂಲಕ ಸಾಗಾಟ ಮಾಡಲು ಯತ್ನಿಸುತ್ತಿರುವುದು ಕಂಡುಬಂದಿದೆ.

ವಾಹನ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!