Tuesday, June 9, 2026
Homeಕರಾವಳಿವಿಟ್ಲದ ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..! 

ವಿಟ್ಲದ ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..! 

- Advertisement -
- Advertisement -

ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿನ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಸ್ಥಳೀಯರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಬೆಂಕಿಯನ್ನು ಆರಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. 

ಈ ಘಟನೆಯಲ್ಲಿ ಗಿಡಮರಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಧಾವಿಸಿದ್ದಾರೆ. ಬೆಂಕಿಯನ್ನು ಆರಿಸುವ ಕಾರ್ಯವು ಮುಂದುವರೆದಿದೆ.

ಬೆಂಕಿ ಕಾಣಿಸುವ ಮುಖ್ಯ ಕಾರಣ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಿರುವುದಾಗಿದ್ದು, ಶಾರ್ಟ್‌ ಸರ್ಕ್ಯೂಟ್‌‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಸ್ಥಳೀಯರಿಂದ ತಿಳಿದುಬಂದಿದೆ.

- Advertisement -

Latest News

error: Content is protected !!