Saturday, June 13, 2026
Homeಅಪರಾಧರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ; ಕಾರಿನ ಹಿಂಬದಿ ಸಂಪೂರ್ಣ ಜಖಂ..!

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಢಿಕ್ಕಿ; ಕಾರಿನ ಹಿಂಬದಿ ಸಂಪೂರ್ಣ ಜಖಂ..!

- Advertisement -
- Advertisement -

ಸುಳ್ಯ: ಇಲ್ಲಿನ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಜಖಂಗೊಂಡಿರುವ ಘಟನೆ ನಡೆದಿದೆ.

ಬೆಳಗ್ಗೆ 5ರ ಸುಮಾರಿಗೆ ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಮಸೀದಿಗೆ ತಮ್ಮ ಕಾರಿನಲ್ಲಿ ಬಂದಿದ್ದರು. ಅವರು ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು.

ಬೆಳಗ್ಗಿನ ಜಾವ 5.30ರ ವೇಳೆಗೆ ಈ ಘಟನೆ ನಡೆದಿದ್ದು, ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿ ಮತ್ತೆ ಸುಳ್ಯದ ಕಡೆ ಮುಖ ಮಾಡಿ ನಿಂತಿತು. ಈ ಸಂದರ್ಭದಲ್ಲಿ ಅಲ್ಲಿದ್ದಂತಹ ಬೈಕ್ ಗೆ ಕಾರು ತಾಗಿತೆನ್ನಲಾಗಿದೆ. ಕಾರಿನ ಹಿಂಬದಿ ಸಂಪೂರ್ಣ ಜಖಂ ಗೊಂಡಿದೆ. ವಿಚಾರವನ್ನು ತಿಳಿದು ಪೋಲೀಸರು ಸ್ಥಳಕ್ಕೆ ಆಗಮಿಸಿದ್ದರು.

- Advertisement -

Latest News

error: Content is protected !!