Friday, June 5, 2026
Homeಆರಾಧನಾಏಪ್ರಿಲ್ 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ; ಪೇಜಾವರ ಶ್ರೀ

ಏಪ್ರಿಲ್ 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ; ಪೇಜಾವರ ಶ್ರೀ

- Advertisement -
- Advertisement -

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಎ. 17ರಂದು ಶ್ರೀರಾಮ ನವಮಿ ಪ್ರಯುಕ್ತ ವಿಶೇಷ ಪೂಜೆ, ಉತ್ಸವಗಳು ನಡೆಯಲಿವೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳವರು ತಿಳಿಸಿದ್ದಾರೆ.

ಓಡೀಲು ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಶ್ರೀರಾಮ ನವಮಿ ದಿನದಂದು ಸೂರ್ಯ ಕಿರಣ ಬಾಲರಾಮನ ವಿಗ್ರಹವನ್ನು ಸ್ಪರ್ಶಿಸುವ ಅಪೂರ್ವ ಕ್ಷಣವನ್ನು ವೀಕ್ಷಿಸಲು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಪ್ರತಿನಿತ್ಯ ಸಹಸ್ರಾರು ಭಕ್ತರು ನಾಡಿನೆಲ್ಲೆಡೆಯಿಂದ ಆಗಮಿಸಿ ಬಾಲರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಅಯೋಧ್ಯೆಯನ್ನು ಸಂದರ್ಶಿಸದ ಭಕ್ತರು ತಮ್ಮ ಬಿಡುವಿನ ವೇಳೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದು ಕೃತಾರ್ಥರಾಗಬೇಕೆಂದಿದ್ದಾರೆ ಎಂದು ತಿಳಿಸಿದರು.

- Advertisement -

Latest News

error: Content is protected !!