Wednesday, June 3, 2026
Homeಕರಾವಳಿಮಂಗಳೂರುಮಂಗಳೂರು; ಪ್ರಚಾರದ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

ಮಂಗಳೂರು; ಪ್ರಚಾರದ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

- Advertisement -
- Advertisement -

ಮಂಗಳೂರು; ಪ್ರಚಾರದ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಅದು ಹೊಡೆದಾಡುವ ಹಂತಕ್ಕೆ ಹೋದ ಘಟನೆ ಉರ್ವ ಚಿಲಿಂಬಿ ಸಾಯಿ ಮಂದಿರದ ಬಳಿ ನಡೆದಿದೆ.
ಮಂಗಳೂರಿನ ಉರ್ವ ಚಿಲಿಂಬಿ ಸಮೀಪ ಇರುವ ಸಾಯಿಮಂದಿರದ ಎದುರು ರಾಮಮಂದಿರ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕಾಂಗ್ರೇಸ್ ಕಾರ್ಯಕರ್ತರು ಪ್ರಚಾರ ನಡೆಸದಂತೆ ಆಕ್ಷೇಪಿಸಿದ್ದಾರೆ.

ಈ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟದ ಹಂತಕ್ಕೆ ತಲುಪಿತ್ತು, ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಕಾಂಗ್ರೇಸ್ ಮುಖಂಡ ಮಿಥುನ್ ರೈ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸ್ಥಳದಿಂದ ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

- Advertisement -

Latest News

error: Content is protected !!