Friday, June 5, 2026
HomeUncategorizedಪ್ರಿಯಾಂಕ್ ಖರ್ಗೆ, ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದೂರು

ಪ್ರಿಯಾಂಕ್ ಖರ್ಗೆ, ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದೂರು

- Advertisement -
- Advertisement -

ಬೆಂಗಳೂರು: 39 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ.

ಈ ಕುರಿತು ಇಂದು ನಿಯೋಗವು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.

ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇನ್ನೊಂದು ದೂರು ಕೊಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್‍ ನ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಆಗ್ರಹಿಸಲಾಯಿತು.

- Advertisement -

Latest News

error: Content is protected !!