Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಾರಾವಿ ಚೆಕ್ ಪೋಸ್ಟ್, ಎಳನೀರು ಮತಗಟ್ಟೆಗೆ ಡಿಸಿ,ಎಸ್ಪಿ ಭೇಟಿ

ಬೆಳ್ತಂಗಡಿ : ನಾರಾವಿ ಚೆಕ್ ಪೋಸ್ಟ್, ಎಳನೀರು ಮತಗಟ್ಟೆಗೆ ಡಿಸಿ,ಎಸ್ಪಿ ಭೇಟಿ

- Advertisement -
- Advertisement -

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್ ಸಿ.ಬಿ ಗುರುವಾರ ನಾರಾವಿ ಚೆಕ್ ಪೋಸ್ಟ್ ಹಾಗೂ ಎಳನೀರು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳ್ತಂಗಡಿ ತಾಲೂಕಿನಲ್ಲಿ ನಾರಾವಿ ಮತ್ತು ಚಾರ್ಮಾಡಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.

ಚುನಾವಣಾ ಅಕ್ರಮಗಳನ್ನು ತಡೆಗಟ್ಟುವುದಕ್ಕಾಗಿ ತೆರೆದುಕೊಂಡಿರುವ ಈ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು,ಇಲ್ಲಿಂದ ಹೋಗುವ ಪ್ರತಿ ವಾಹನವನ್ನು ತಪಾಸಣೆ ನಡೆಸಿ ಮುಂದುವರಿಯಲು ಅವಕಾಶ ನೀಡಲಾಗುತ್ತದೆ. ನಾರಾವಿ ಚೆಕ್ ಪೋಸ್ಟ್ ನ ಕಾರ್ಯನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪೋಲಿಸ್ ಎಸ್ ಪಿ ರಿಷ್ಯಂತ್ ಸಿ.ಬಿ‌., ಪುತ್ತೂರು ಎಸಿ ಜುಬಿನ್ ಮೊಹಪಾತ್ರ, ಡಿವೈಎಸ್ ಪಿ ವಿಜಯ ಪ್ರಸಾದ್, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಪೊಲೀಸ್ ವೃತ ನಿರೀಕ್ಷಕರಾದ ಸುಬ್ಬಾಪುರ ಮಠ, ವಸಂತ ಆಚಾರ್, ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಎಳನೀರು,ಕಜಕ್ಕೆ ಮತಗಟ್ಟೆಗೆ ಭೇಟಿ: ಜಿಲ್ಲಾಧಿಕಾರಿಯವರ ತಂಡ ಮಲವಂತಿಗೆ ಗ್ರಾಮದ ಎಳನೀರು, ಕಜಕ್ಕೆ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿತು. ಅಲ್ಲಿರುವ ಮೊಬೈಲ್ ನೆಟ್ವರ್ಕ್ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.

- Advertisement -

Latest News

error: Content is protected !!